Dasara 2024 : ಸಂಪನ್ನಗೊಂಡ ಬನ್ನಿ ಮುಡಿಯುವ ಕಾರ್ಯಕ್ರಮ

Dasara 2024

                       Dasara 2024, Hosanagara Dasara,News,Kannada,NammaShivamogga.

                                                    Dasara 2024

ಹೊಸನಗರವಿಜಯದಶಮಿಯ ಕೊನೆಯ ದಿನವಾದ ಶನಿವಾರ  ಹೊಸನಗರ ಪಟ್ಟಣದ ದ್ಯಾವರ್ಸದಲ್ಲಿನ ಶ್ರೀ ಕಳೂರು ರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಸಂಪನ್ನಗೊಂಡಿತು.

 

Dasara 2024

ತಾಲೂಕು ಕಚೇರಿಯಲ್ಲಿ ಮಧ್ಯಾಹ್ನ ಆರಂಭಗೊಂಡ ಖಜಾನೆಯ ವಿವಿಧ ಪೂಜಾ ವಿಧಿ ವಿಧಾನ ಕಾರ್ಯಕ್ರಮಗಳ ಬಳಿಕ ತಾಲೂಕು ದಂಡಾಧಿಕಾರಿಗಳಾದ ರಶ್ಮಿ ಹೆಚ್ ಜೇ ವಿವಿಧ ಕಲಾತಂಡಗಳೊಂದಿಗೆ ಜನಾರ್ದನ ಸ್ವಾಮಿ ದೇವಸ್ಥಾನದ ದೇವರ ಉತ್ಸವ ಮೆರವಣಿಗೆ ಹಾಗೂ ಗಣಪತಿ ದೇವಸ್ಥಾನದ ದೇವರ ಉತ್ಸವ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ತೆರಳಿ ಕಳೂರು ಶ್ರೀರಾಮೇಶ್ವರ ದೇವಸ್ಥಾನದ ಆವರಣದಲ್ಲಿನ ಬನ್ನಿಮಂಟಪಕ್ಕೆ ಪೂಜೆಯನ್ನ ಸಲ್ಲಿಸಿ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

Dasara 2024
Dasara 2024

ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮದ ಅಂಗವಾಗಿ ನಡೆಸಲಾಗಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು, ದಸರಾ ಆಚರಣೆ ಸಮಿತಿಯ ಅಧ್ಯಕ್ಷರಾದ ದುಮ್ಮಾ ವಿನಯ್ ಗೌಡ, ಕಾರ್ಯದರ್ಶಿ ಅಶ್ವಿನಿ ಕುಮಾರ್, ಖಜಾಂಚಿ ಚಿರಾಗ್, ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗಪ್ಪ, ಉಪಾಧ್ಯಕ್ಷ ಚಂದ್ರುಕಲ, ಮಾಸ್ತಿ ಕಟ್ಟೆ ಸುಬ್ರಮಣ್ಯ, ಮಂಜು ಸಣ್ಣಕ್ಕಿ ಹಾಗೂ ಪಟ್ಟಣ ಪಂಚಾಯಿತಿಯ ಸದಸ್ಯರುಗಳು ದಸರಾ ಆಚರಣೆ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

                                                                                            ವರದಿ : ಮನು ಸುರೇಶ್

                        Dasara 2024,Hosanagara Dasara,News,Kannada,NammaShivamogga.

ಇದನ್ನೂ ಓದಿ: Shivamogga Murder Case : ಆಧುನಿಕ ಪ್ರೀತಿಯ ಕೊಲೆ ಕಹಾನಿ

Hosanagara News
Hosanagara News

Leave a Reply

Your email address will not be published. Required fields are marked *